Genesis 14:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಾಲೇಮಿನ ರಾಜನಾದ ಮೆಲ್ಕೀಚೆದೆಕನು ಸಹ ಅಬ್ರಾಮನನ್ನು ಭೇಟಿಯಾಗಲು ಹೋದನು. ಮಹೋನ್ನತನಾದ ದೇವರ ಯಾಜಕನಾಗಿದ್ದ ಅವನು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಬಂದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.
Kannada BSI Bible 2016
ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾಲೇವಿುನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದು ಅಬ್ರಾಮನನ್ನು ಆಶೀರ್ವದಿಸಿ -
Kannada Bible (KNCL) BSI 2016
ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾಲೇಮಿನ ಅರಸ ಮೆಲ್ಕಿಜೆದೇಕನು ರೊಟ್ಟಿ ಮತ್ತು ದ್ರಾಕ್ಷಾರಸವನ್ನು ತಂದನು. ಇವನು ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು.