Genesis 14:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;
Kannada BSI Bible 2016
ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ;
Kannada Bible (KNCL) BSI 2016
“ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನು ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನು ಭೂಮಿ, ಆಕಾಶವನ್ನು ಸೃಷ್ಟಿಸಿದ ಮಹೋನ್ನತ ದೇವರಿಂದ ಆಶೀರ್ವಾದ ಹೊಂದಲಿ.