Genesis 14:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ರಾಜರುಗಳೆಲ್ಲ ಸೊದೋಮಿನ ರಾಜನಾದ ಬೆರಗನಿಗೂ ಗೊಮೋರದ ರಾಜನಾದ ಬಿರ್ಶಗನಿಗೂ ಅದ್ಮಾಹದ ರಾಜನಾದ ಶಿನಾಬನಿಗೂ ಚೆಬೋಯೀಮಿನ ರಾಜನಾದ ಶೆಮೇಬರನಿಗೂ ಚೋಗರ್ ಎಂಬ ಬೇಲಗಿನ ರಾಜನಿಗೂ ವಿರುದ್ಧವಾಗಿ ಯುದ್ಧಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.
Kannada BSI Bible 2016
ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ಲವಣಸಮುದ್ರವಾಗಿರುವ ಸಿದ್ದೀಮ್ ತಗ್ಗಿನೊಳಗೆ ಕೂಡಿದ್ದ ಸೊದೋವಿುನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯೀವಿುನ ಅರಸನಾದ ಶೆಮೇಬರನು, ಬೇಲಗಿನ ಅಂದರೆ ಚೋಗರದ ಅರಸನು ಇವರೊಡನೆ ಯುದ್ಧಮಾಡಿದರು.
Kannada Bible (KNCL) BSI 2016
ಈಗ ಲವಣ ಸಮುದ್ರ ಎನಿಸಿಕೊಳ್ಳುವ ಸಿದ್ದೀಮ್ ತಗ್ಗುಪ್ರದೇಶದಲ್ಲಿ ಒಂದುಗೂಡಿದ್ದ ಸೊದೋಮಿನ ಅರಸ ಬೆರಗ, ಗೊಮೋರದ ಅರಸ ಬಿರ್ಶಗ, ಅದ್ಮಾಹದ ಅರಸ ಶಿನಾಬ, ಚೆಬೋಯಿಮನ ಅರಸ ಶೆಮೇಬರ, ಬೆಲಗಿನ (ಅಂದರೆ ಚೋಗರದ) ಅರಸ - ಈ ಐವರೊಡನೆ ಯುದ್ಧಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಸೊದೋಮಿನ ಅರಸ ಬೆರಗನೂ ಗೊಮೋರದ ಅರಸ ಬಿರ್ಶಗನೂ ಅದ್ಮಾಹದ ಅರಸ ಶಿನಾಬನಿಗೂ ಚೆಬೋಯಿಮಿನ ಅರಸ ಶೆಮೇಬರನಿಗೂ ಬೆಲಗಿನ ಅಂದರೆ, ಚೋಗರದ ಅರಸನಿಗೂ ವಿರೋಧವಾಗಿ ಯುದ್ಧಮಾಡಿದರು.