Genesis 14:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಸೊದೋಮಿನ ರಾಜನು ಅಬ್ರಾಮನಿಗೆ, “ಈ ವಸ್ತುಗಳನ್ನೆಲ್ಲ ನೀನೇ ಇಟ್ಟುಕೊ. ಶತ್ರುಗಳು ವಶಪಡಿಸಿಕೊಂಡಿರುವ ನನ್ನ ಜನರನ್ನು ಮಾತ್ರ ನನಗೆ ಕೊಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು.
Kannada BSI Bible 2016
ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊದೋವಿುನ ಅರಸನು ಅಬ್ರಾಮನಿಗೆ - ನೀನು ಬಿಡಿಸಿದ ಜನರನ್ನು ನನಗೆ ಒಪ್ಪಿಸು;
Kannada Bible (KNCL) BSI 2016
ಸೊದೋಮಿನ ಅರಸನು ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಕೊಡು; ಆಸ್ತಿಯನ್ನು ನೀನೇ ಇಟ್ಟುಕೊ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊದೋಮಿನ ಅರಸನು ಅಬ್ರಾಮನಿಗೆ, “ನೀನು ಬಿಡಿಸಿಕೊಂಡು ಬಂದ ಜನರನ್ನು ನನಗೆ ಕೊಡು. ಸಂಪತ್ತನ್ನು ನೀನು ತೆಗೆದುಕೋ,” ಎಂದನು.