Genesis 14:23 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’
Kannada BSI Bible 2016
ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
Kannada Bible (KNCL) BSI 2016
ನಿನಗೆ ಸೇರಿದವುಗಳಲ್ಲಿ ಯಾವುದನ್ನೂ, ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದ’ ಎಂದು ಹೇಳಿಕೊಳ್ಳುವುದಕ್ಕೂ ನಿನಗೆ ಆಸ್ಪದ ಇರಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನಗೆ ಸೇರಿದ ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ’ ಎಂದು ನೀನು ಹೇಳಬಾರದು.