Genesis 14:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಯೌವನಸ್ಥರು ತಿಂದ ಆಹಾರದ ಹೊರತು ಬೇರೆ ಯಾವುದನ್ನೂ ನಾನು ಸ್ವೀಕರಿಸುವುದಿಲ್ಲ. ಆದರೆ ಬೇರೆ ಜನರಿಗೆ ಅವರ ಪಾಲನ್ನು ಕೊಡು. ನಾವು ಯುದ್ಧದಲ್ಲಿ ಗೆದ್ದುತಂದ ವಸ್ತುಗಳನ್ನು ತೆಗೆದುಕೊ; ಆನೇರ್, ಎಷ್ಕೋಲ ಮತ್ತು ಮಮ್ರೆಯರಿಗೆ ಅವರ ಪಾಲನ್ನು ಕೊಡು. ಈ ಜನರು ಯುದ್ಧದಲ್ಲಿ ನನಗೆ ಸಹಾಯ ಮಾಡಿದರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು.
Kannada BSI Bible 2016
ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಇರಲಿ ಎಂದು ಹೇಳಿದನು.
Kannada Bible (KNCL) BSI 2016
ನನಗೆ ಏನೂ ಬೇಡ. ಆಳುಗಳು ತಿಂದದ್ದು ಸಾಕು. ನನ್ನ ಜೊತೆಗರರಾದ ಅನೇರ, ಎಷ್ಕೋಲ ಮತ್ತು ಮಮ್ರೆ ಅವರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಸೇರಲಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಆಳುಗಳು ಊಟಮಾಡಿದ್ದು ಸಾಕು. ನನ್ನ ಸಂಗಡ ಬಂದ ಆನೇರ, ಎಷ್ಕೋಲ್ ಮತ್ತು ಮಮ್ರೆ ಎಂಬ ಈ ಜನರ ಪಾಲನ್ನು ಬಿಟ್ಟು ನಾನು ಏನನ್ನೂ ತೆಗೆದುಕೊಳ್ಳುವುದಿಲ್ಲ. ಇವರು ತಮ್ಮ ಪಾಲನ್ನು ತೆಗೆದುಕೊಳ್ಳಲಿ,” ಎಂದನು.