Genesis 14:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬಳಿಕ ರಾಜ ಕೆದೊರ್ಲಗೋಮರನು ಉತ್ತರದ ಕಡೆಗೆ ತಿರುಗಿ ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಎಲ್ಲಾ ಅಮಾಲೇಕ್ಯರನ್ನು ಸೋಲಿಸಿದನು. ಇದಲ್ಲದೆ ಅವನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಸೋಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.
Kannada BSI Bible 2016
ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಅಮಾಲೇಕ್ಯರ ಸಮಸ್ತದೇಶವನ್ನೂ ಹಚಚೋನ್‍ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.
Kannada Bible (KNCL) BSI 2016
ಅನಂತರ ಎನ್ಮಿಷ್ಪಾಟ್ ಎನ್ನಲ್ಪಟ್ಟ ಕಾದೇಶ್‍ಗೆ ಹಿಂದಿರುಗಿ ಬಂದು ಅಮಾಲೇಕ್ಯರ ಸಮಸ್ತ ನಾಡನ್ನು ಮತ್ತು ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಜಯಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.