Genesis 15:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”
Kannada BSI Bible 2016
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.
Kannada Bible (KNCL) BSI 2016
ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”