Genesis 15:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಾಮನು ದೇವರಿಗೋಸ್ಕರ ಅವುಗಳನ್ನೆಲ್ಲ ತೆಗೆದುಕೊಂಡು ಬಂದನು. ಅಬ್ರಾಮನು ಅವುಗಳನ್ನು ಕತ್ತರಿಸಿ ಎರಡೆರಡು ಹೋಳು ಮಾಡಿದನು. ಆಮೇಲೆ ಅಬ್ರಾಮನು ತುಂಡಿಗೆ ತುಂಡನ್ನು ಎದುರಾಗಿಟ್ಟನು. ಅಬ್ರಾಮನು ಪಕ್ಷಿಗಳನ್ನು ಮಾತ್ರ ಎರಡೆರಡು ಹೋಳು ಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ.
Kannada BSI Bible 2016
ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಪಶುಗಳನ್ನು ಕಡಿದು ಎರಡೆರಡು ಹೋಳುಮಾಡಿ ತುಂಡಿಗೆ ತುಂಡನ್ನು ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಕಡಿಯಲಿಲ್ಲ.
Kannada Bible (KNCL) BSI 2016
ಅಬ್ರಾಮನು ಅವುಗಳನ್ನೆಲ್ಲಾ ತೆಗೆದುಕೊಂಡು ಬಂದು ಆ ಪ್ರಾಣಿಗಳನ್ನು ಕಡಿದು, ಎರಡೆರಡು ಹೋಳುಮಾಡಿ, ತುಂಡಿಗೆ ತುಂಡನ್ನು ಎದುರಾಗಿಟ್ಟನು. ಪಕ್ಷಿಗಳನ್ನು ಮಾತ್ರ ಕಡಿಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅವನು ಇವುಗಳನ್ನೆಲ್ಲಾ ಯೆಹೋವ ದೇವರಿಗಾಗಿ ತೆಗೆದುಕೊಂಡು ಬಂದು ಎರಡೆರಡು ಹೋಳುಮಾಡಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು. ಆದರೆ ಅವನು ಪಕ್ಷಿಗಳನ್ನು ತುಂಡು ಮಾಡಲಿಲ್ಲ.