Genesis 15:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ವಲ್ಪ ಸಮಯದ ನಂತರ, ದೊಡ್ಡ ಪಕ್ಷಿಗಳು ಆ ಪ್ರಾಣಿಗಳ ಮಾಂಸವನ್ನು ತಿನ್ನಲು ಹಾರಿ ಬಂದವು. ಆದರೆ ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪಶುಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.
Kannada BSI Bible 2016
ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಶವಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.
Kannada Bible (KNCL) BSI 2016
ಆ ಪ್ರಾಣಿಗಳ ತುಂಡುಗಳ ಮೇಲೆ ರಣಹದ್ದುಗಳು ಎರಗಿದಾಗ ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಣಹದ್ದುಗಳು ಆ ಶವಗಳ ಮೇಲೆ ಇಳಿದು ಬಂದಾಗ, ಅಬ್ರಾಮನು ಅವುಗಳನ್ನು ಓಡಿಸಿದನು.