Genesis 15:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಅಬ್ರಾಮನಿಗೆ, “ನಾವು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ. ಮೂರು ವರ್ಷದ ಒಂದು ಹಸುವನ್ನೂ ಮೂರು ವರ್ಷದ ಒಂದು ಆಡನ್ನೂ ಮತ್ತು ಮೂರು ವರ್ಷದ ಒಂದು ಟಗರನ್ನೂ ತೆಗೆದುಕೊಂಡು ಬಾ. ಇದಲ್ಲದೆ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳವನ್ನೂ ತೆಗೆದುಕೊಂಡು ಬಾ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು.
Kannada BSI Bible 2016
ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಆತನು - ನೀನು ಮೂರು ಮೂರು ವರುಷಗಳ ಮಣಕ, ಆಡು, ಟಗರು ಇವುಗಳನ್ನೂ ಬೆಳವಕ್ಕಿಯನ್ನೂ ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ ಅಂದನು.
Kannada Bible (KNCL) BSI 2016
ಸರ್ವೇಶ್ವರ ಪ್ರತ್ಯುತ್ತರವಾಗಿ, “ನೀನು ಮೂರು ಮೂರು ವರ್ಷದ ಒಂದು ಕಡಸನ್ನು, ಒಂದು ಆಡನ್ನು, ಒಂದು ಟಗರನ್ನು, ಒಂದು ಬೆಳವಕ್ಕಿಯನ್ನು ಹಾಗು ಒಂದು ಮರಿಪಾರಿವಾಳವನ್ನು ತೆಗೆದುಕೊಂಡು ಬಾ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೆಹೋವ ದೇವರು ಅಬ್ರಾಮನಿಗೆ, “ಮೂರು ವರ್ಷದ ಕಡಸನ್ನು, ಮೂರು ವರ್ಷದ ಮೇಕೆಯನ್ನು, ಮೂರು ವರ್ಷದ ಟಗರನ್ನು, ಒಂದು ಬೆಳವಕ್ಕಿಯನ್ನು, ಒಂದು ಪಾರಿವಾಳವನ್ನು ನನಗಾಗಿ ತೆಗೆದುಕೊಂಡು ಬಾ,” ಎಂದರು.