Genesis 16:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ಯೆಹೋವನ ದೂತನು ಹಾಗರಳಿಗೆ, “ನಾನು ನಿನ್ನ ಸಂತತಿಯವರನ್ನು ಅಸಂಖ್ಯಾತರನ್ನಾಗಿ ಮಾಡುವೆನು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು.
Kannada BSI Bible 2016
ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಯೆಹೋವನ ದೂತನು ಅವಳಿಗೆ - ನಿನಗೆ ಬಹುಸಂತಾನವಾಗ ಮಾಡುವೆನು; ಅದು ಲೆಕ್ಕಿಸಕೂಡದಷ್ಟು ಅಪರಿವಿುತವಾಗುವದು ಎಂದು ಹೇಳಿದನು.
Kannada Bible (KNCL) BSI 2016
ಅದೂ ಅಲ್ಲದೆ ಸ್ವಾಮಿಯ ದೂತನು, “ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ದೊಡ್ಡದಾಗಿಸುವೆನು”, ಎಂದು ಹೇಳಿ ಇಂತೆಂದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರ ದೂತನು ಅವಳಿಗೆ, “ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ಹೆಚ್ಚಿಸುತ್ತೇನೆ,” ಎಂದನು.