Genesis 16:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ದೇವದೂತನು ಆಕೆಗೆ, “ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ; ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು; ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.
Kannada BSI Bible 2016
ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆಹೋವನ ದೂತನು ಅವಳಿಗೆ - ನೀನು ಬಸುರಾಗಿದ್ದೀಯಷ್ಟೆ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.
Kannada Bible (KNCL) BSI 2016
ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೆಹೋವ ದೇವರ ದೂತನು ಆಕೆಗೆ ಹೀಗೆ ಹೇಳಿದನು: “ನೀನು ಈಗ ಗರ್ಭಿಣಿಯಾಗಿರುವೆ, ಒಬ್ಬ ಮಗನನ್ನು ಹೆರುವೆ. ಅವನಿಗೆ, ಇಷ್ಮಾಯೇಲ್ ಎಂದು ಹೆಸರಿಡಬೇಕು. ಏಕೆಂದರೆ ಯೆಹೋವ ದೇವರು ನಿನ್ನ ವ್ಯಥೆಗೆ ಕಿವಿಗೊಟ್ಟಿದ್ದಾರೆ.