Genesis 16:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಪಡೆಯುವ ಅವಕಾಶವನ್ನು ಕೊಡಲಿಲ್ಲ. ಆದ್ದರಿಂದ ನನ್ನ ಸೇವಕಿಯಾದ ಹಾಗರಳ ಬಳಿಗೆ ಹೋಗು. ಆಕೆಯಲ್ಲಿ ಹುಟ್ಟುವ ಮಗುವನ್ನು ನನ್ನ ಮಗುವಂತೆ ಸ್ವೀಕರಿಸಿಕೊಳ್ಳುವೆನು” ಎಂದು ಹೇಳಿದಳು. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳಿಗೆ ವಿಧೇಯನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.
Kannada BSI Bible 2016
ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಸಾರಯಳು ಅಬ್ರಾಮನಿಗೆ - ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಷ್ಟೆ; ನೀನು ನನ್ನ ದಾಸಿಯ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಪಟ್ಟನು.
Kannada Bible (KNCL) BSI 2016
ಎಂದೇ ಸಾರಯಳು ಅಬ್ರಾಮನಿಗೆ, “ನೋಡಿ, ನನಗೇನೋ ಸರ್ವೇಶ್ವರ ಸ್ವಾಮಿ ಮಕ್ಕಳನ್ನು ದಯಪಾಲಿಸಲಿಲ್ಲ; ನೀವು ನನ್ನ ದಾಸಿಯನ್ನು ಸೇರಬೇಕು. ಬಹುಶಃ ಅವಳ ಮೂಲಕವಾದರೂ ನನಗೆ ಮಕ್ಕಳಾದೀತು,” ಎಂದು ಹೇಳಿದಳು. ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಾರಯಳು ಅಬ್ರಾಮನಿಗೆ, “ನಾನು ಮಕ್ಕಳನ್ನು ಹೆರದಂತೆ ಯೆಹೋವ ದೇವರು ನನಗೆ ಅಡ್ಡಿ ಮಾಡಿದ್ದಾರೆ. ದಯಮಾಡಿ ನೀನು ನನ್ನ ದಾಸಿಯ ಬಳಿಗೆ ಹೋಗು. ಒಂದು ವೇಳೆ ನಾನು ಅವಳ ಮೂಲಕ ಕುಟುಂಬವನ್ನು ಕಟ್ಟಬಲ್ಲೆ,” ಎಂದಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.