Genesis 16:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಾಮನು ಕಾನಾನಿಗೆ ಬಂದು ಹತ್ತು ವರ್ಷಗಳಾದ ಮೇಲೆ ಇದು ನಡೆಯಿತು. ಹೀಗೆ ಸಾರಯಳು ತನ್ನ ಗಂಡನಾದ ಅಬ್ರಾಮನಿಗೆ ಹಾಗರಳನ್ನು ಕೊಟ್ಟಳು. ಹಾಗರಳು ಆಕೆಯ ಈಜಿಪ್ಟಿನ ಸೇವಕಿಯಾಗಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.
Kannada BSI Bible 2016
ಅಬ್ರಾಮನು ಕಾನಾನ್‌ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಾಮನು ಹತ್ತು ವರುಷ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತ್ಯಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.
Kannada Bible (KNCL) BSI 2016
ಹೀಗೆ ಹತ್ತು ವರ್ಷ ಕಾನಾನ್ ನಾಡಿನಲ್ಲಿ ವಾಸಮಾಡಿದ ಮೇಲೆ ಅಬ್ರಾಮನ ಹೆಂಡತಿ ಸಾರಯಳು ಈಜಿಪ್ಟಿನ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಉಪಪತ್ನಿಯಾಗಿ ಒಪ್ಪಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಾಮನು ಕಾನಾನ್ ದೇಶದಲ್ಲಿ ಹತ್ತು ವರ್ಷ ವಾಸಿಸಿದ ತರುವಾಯ, ಅಬ್ರಾಮನ ಹೆಂಡತಿಯಾದ ಸಾರಯಳು ಈಜಿಪ್ಟಿನವಳಾದ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.