Genesis 16:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಅಬ್ರಾಮನು ಸಾರಯಳಿಗೆ, “ನೀನು ಹಾಗರಳ ಯಜಮಾನಿ. ನೀನು ಅವಳಿಗೆ ಏನುಬೇಕಾದರೂ ಮಾಡಬಹುದು” ಎಂದು ಹೇಳಿದನು. ಆದ್ದರಿಂದ ಸಾರಯಳು ಹಾಗರಳನ್ನು ಶಿಕ್ಷಿಸಿದಳು. ಆಗ ಹಾಗರಳು ಓಡಿಹೋದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.
Kannada BSI Bible 2016
ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳೆ; ಮನಸ್ಸುಬಂದಂತೆ ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.
Kannada Bible (KNCL) BSI 2016
ಅದಕ್ಕೆ ಅಬ್ರಾಮನು, “ನಿನ್ನ ದಾಸಿ ನಿನ್ನ ಕೈಯಲ್ಲೇ ಇದ್ದಾಳೆ. ನಿನಗಿಷ್ಟ ಬಂದಂತೆ ಮಾಡು,” ಎಂದುಬಿಟ್ಟನು. ಬಳಿಕ ಸಾರಯಳು ಕೊಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಹಾಗರಳು ಓಡಿಹೋದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಬ್ರಾಮನು ಸಾರಯಳಿಗೆ, “ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ. ನಿನ್ನ ಮನಸ್ಸಿಗೆ ಬಂದಂತೆ ಮಾಡು,” ಎಂದನು. ಆಗ ಸಾರಯಳು ಹಾಗರಳನ್ನು ಬಾಧಿಸಿದ್ದರಿಂದ, ಅವಳು ಸಾರಯಳಿಂದ ಓಡಿ ಹೋದಳು.