Genesis 16:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು.
Kannada BSI Bible 2016
ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವಳು - ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ ಅಂದಳು.
Kannada Bible (KNCL) BSI 2016
“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಾರಯಳ ದಾಸಿ ಹಾಗರಳೇ, ನೀನು ಎಲ್ಲಿಂದ ಬಂದೆ? ನೀನು ಎಲ್ಲಿಗೆ ಹೋಗುತ್ತೀ?” ಎಂದು ವಿಚಾರಿಸಿದನು. ಅವಳು, “ನನ್ನ ಯಜಮಾನಿ ಸಾರಯಳನ್ನು ಬಿಟ್ಟು ಓಡಿ ಹೋಗುತ್ತಿದ್ದೇನೆ,” ಎಂದಳು.