Genesis 17:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನೂ ಮತ್ತು ನಿನ್ನ ಎಲ್ಲಾ ಸಂತತಿಯವರು ಕೈಕೊಳ್ಳಬೇಕಾದ ನಿಬಂಧನೆಯೇನೆಂದರೆ, ನಿಮ್ಮಲ್ಲಿ ಹುಟ್ಟಿದ ಪ್ರತಿಯೊಂದು ಗಂಡುಮಗುವಿಗೂ ಸುನ್ನತಿ ಮಾಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.
Kannada BSI Bible 2016
ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೂ ನಿನ್ನ ಹಿಂದೆ ಬರುವ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ನಿಬಂಧನೆಯು ಯಾವದಂದರೆ - ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕೆಂಬದೇ.
Kannada Bible (KNCL) BSI 2016
ನೀನೂ ನಿನ್ನ ಸಂತತಿಯವರೂ ಕೈಗೊಳ್ಳಬೇಕಾದ ನನ್ನ ಒಡಂಬಡಿಕೆ ಇದು: ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನೂ, ನಿನ್ನ ತರುವಾಯ ನಿನ್ನ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ: ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು.