Genesis 17:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು. (Verses 11-12)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.
Kannada BSI Bible 2016
ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಮಾನಸ್ಥಾನದಲ್ಲಿ ಸುನ್ನತಿ ಮಾಡಿಸಿಕೊಳ್ಳಬೇಕು; ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತು.
Kannada Bible (KNCL) BSI 2016
ನೀವು ನಿಮ್ಮ ಜನನಾಂಗದ ಮುಂದೊಗಲನ್ನು ಸುನ್ನತಿಮಾಡಿಸಿಕೊಳ್ಳಬೇಕು. ಅದೇ ನಿಮಗೂ ನನಗೂ ಆದ ಒಡಂಬಡಿಕೆಯ ಗುರುತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸುನ್ನತಿ ಮಾಡಿಸಿಕೊಳ್ಳುವುದು, ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತಾಗಿ ಇರುವುದು.