Genesis 17:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 11
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂದಿನ ಎಲ್ಲಾ ತಲತಲಾಂತರವಾಗಿ ಬರುವ ನಿಮ್ಮ ಪ್ರತಿಯೊಂದು ಗಂಡು ಮಗುವಿಗೂ, ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾಗಲಿ;
Kannada BSI Bible 2016
ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ತಲಾಂತರಗಳಲ್ಲಿ ನಿಮ್ಮಲ್ಲಿರುವ ಪ್ರತಿಯೊಬ್ಬ ಗಂಡಸೂ, ಮನೆಯಲ್ಲಿ ಹುಟ್ಟಿದವನಾದರೂ ನಿನ್ನ ಸಂತತಿಯಲ್ಲಿ ಹುಟ್ಟದೆ ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾದರೂ ಎಂಟು ದಿನಗಳ ವಯಸ್ಸುಳ್ಳವನಾದಾಗ ಅವನಿಗೆ ಸುನ್ನತಿ ಮಾಡಿಸಬೇಕು.
Kannada Bible (KNCL) BSI 2016
ಎಲ್ಲ ತಲಾಂತರಗಳಲ್ಲಿ ನಿಮ್ಮಲ್ಲಿರುವ ಪ್ರತಿಯೊಂದು ಗಂಡುಮಗುವಿಗೂ ಜೀತಗಾರರಿಗೂ ಮನೆಯಲ್ಲಿ ಹುಟ್ಟಿದ ಅಥವಾ ಅನ್ಯರಿಂದ ಕ್ರಯಕ್ಕೆ ಕೊಂಡುಕೊಂಡವರಿಗೂ, ಎಂಟು ದಿನಗಳ ವಯಸ್ಸಾದಾಗ ಸುನ್ನತಿ ಮಾಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸಂತತಿಯವರಲ್ಲಿ ಪ್ರತಿಯೊಂದು ಗಂಡು ಮಗುವಿಗೂ ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು. ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಕ್ರಯಕ್ಕೆ ತೆಗೆದುಕೊಂಡವನಾಗಲಿ,