Genesis 17:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು.
Kannada BSI Bible 2016
ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಆಕೆಯನ್ನು ಆಶೀರ್ವದಿಸಿ ಆಕೆಯಲ್ಲಿ ನಿನಗೆ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು ಎಂದು ಹೇಳಲು ಅಬ್ರಹಾಮನು ಅಡ್ಡಬಿದ್ದು ನಕ್ಕು -
Kannada Bible (KNCL) BSI 2016
ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯನ್ನು ನಾನು ಆಶೀರ್ವದಿಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಆಕೆಯು ಜನಾಂಗಗಳ ತಾಯಿಯಾಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ರಾಷ್ಟ್ರಗಳೂ ಅರಸರೂ ಹುಟ್ಟುವರು,” ಎಂದರು.