Genesis 17:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.
Kannada BSI Bible 2016
ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.
Kannada Bible (KNCL) BSI 2016
ಅದೇ ದಿನದಂದು ಅಬ್ರಹಾಮನು ದೇವರ ಅಪ್ಪಣೆಯ ಪ್ರಕಾರ ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲ ಗಂಡಸರಿಗೂ ಮನೆಯಲ್ಲಿ ಹುಟ್ಟಿದ ಹಾಗು ತಾನು ಕ್ರಯಕ್ಕೆ ಕೊಂಡುಕೊಂಡ ಜೀತದಾರರಿಗೂ ಸುನ್ನತಿಮಾಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು ತನ್ನ ಮಗ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರಿಗೂ ತಾನು ಕ್ರಯಕ್ಕೆ ತೆಗೆದುಕೊಂಡವರೆಲ್ಲರಿಗೂ ಹೀಗೆ ತನ್ನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ದೇವರು ತನಗೆ ಹೇಳಿದ ಹಾಗೆ, ಆ ದಿನವೇ ಸುನ್ನತಿ ಮಾಡಿಸಿದನು.