Genesis 17:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಅಬ್ರಾಮ’ ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ‘ಅಬ್ರಹಾಮ’ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು.
Kannada BSI Bible 2016
ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲ ಪಿತೃವಾಗಿ ನೇವಿುಸಿರುವದರಿಂದ ನಿನಗೆ ಅಬ್ರಹಾಮನೆಂದು ಹೆಸರಿರುವದು.
Kannada Bible (KNCL) BSI 2016
ಇನ್ನು ಮುಂದೆ ನಿನಗೆ ‘ಅಬ್ರಾಮ’ ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ ‘ಅಬ್ರಹಾಮ’ ಎಂಬ ಹೆಸರಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಮುಂದೆ, ‘ಅಬ್ರಾಮ್’ ಎಂದು ನಿನಗೆ ಹೆಸರಿರುವುದಿಲ್ಲ. ನಿನ್ನ ಹೆಸರು, ‘ಅಬ್ರಹಾಮ ’ ಎಂದು ಇರುವುದು. ಏಕೆಂದರೆ ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ.