Genesis 17:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
Kannada BSI Bible 2016
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
Kannada Bible (KNCL) BSI 2016
ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.