Genesis 17:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.
Kannada BSI Bible 2016
ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಪ್ರವಾಸವಾಗಿರುವ ಕಾನಾನ್‍ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟು ಅವರಿಗೆ ದೇವರಾಗಿರುವೆನು ಅಂದನು.
Kannada Bible (KNCL) BSI 2016
ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.