Genesis 17:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ದೇವರು ಅಬ್ರಹಾಮನಿಗೆ, “ನಮ್ಮ ಒಡಂಬಡಿಕೆಯ ಪ್ರಕಾರ ನೀನು ಮತ್ತು ನಿನ್ನ ಸಂತತಿಯವರೆಲ್ಲರೂ ನನ್ನ ಒಡಂಬಡಿಕೆಗೆ ವಿಧೇಯರಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.
Kannada BSI Bible 2016
ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ದೇವರು ಅಬ್ರಹಾಮನಿಗೆ - ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರೂ ಎಲ್ಲಾ ತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.
Kannada Bible (KNCL) BSI 2016
ಇದಲ್ಲದೆ ದೇವರು ಅಬ್ರಹಾಮನಿಗೆ ಹೀಗೆಂದು ಹೇಳಿದರು: “ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು ನೀನು ಮಾತ್ರವಲ್ಲ, ನಿನ್ನ ಸಂತತಿಯವರು ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನೂ, ನಿನ್ನ ತರುವಾಯ ಬರುವ ನಿನ್ನ ಸಂತತಿಯವರೂ ತಲತಲಾಂತರಕ್ಕೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು.