Genesis 18:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಹಾಮನು ಮಮ್ರೆಯಲ್ಲಿದ್ದ ಓಕ್ ಮರಗಳ ತೋಪಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಯೆಹೋವನು ಅವನಿಗೆ ಕಾಣಿಸಿಕೊಂಡನು. ಅಂದು ಬಿಸಿಲಿನ ತಾಪದಿಂದಾಗಿ ಅಬ್ರಹಾಮನು ತನ್ನ ಗುಡಾರದ ಬಾಗಿಲ ಬಳಿ ಕುಳಿತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.
Kannada BSI Bible 2016
ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು ಮಧ್ಯಾಹ್ನದಲ್ಲಿ ಮಮ್ರೇತೋಪಿನ ತನ್ನ ಗುಡಾರದ ಬಾಗಲಲ್ಲಿ ಕೂತಿರುವಾಗ ಯೆಹೋವನು ಅವನಿಗೆ ದರ್ಶನಕೊಟ್ಟನು.
Kannada Bible (KNCL) BSI 2016
ಒಂದು ದಿನ ಅಬ್ರಹಾಮನು ಉರಿಬಿಸಿಲ ವೇಳೆಯಲ್ಲಿ ಮಮ್ರೋತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿದ್ದನು. ಆಗ ಅವನಿಗೆ ಸರ್ವೇಶ್ವರ ಸ್ವಾಮಿಯ ದರ್ಶನವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮಮ್ರೆಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡರು. ಹಗಲಿನ ಬಿಸಿಲಿನಲ್ಲಿ ಅವನು ಡೇರೆಯ ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.