Genesis 18:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಸಾರಳಿಗೆ ನಂಬಲಾಗಲಿಲ್ಲ. ಆಕೆ ತನ್ನೊಳಗೆ, “ಈಗಾಗಲೇ ನನಗೆ ವಯಸ್ಸಾಗಿದೆ; ನನ್ನ ಗಂಡನಿಗೂ ವಯಸ್ಸಾಗಿದೆ” ಅಂದುಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
Kannada BSI Bible 2016
ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನಂಥ ಮುದುಕಿಗೆ ಭೋಗವಾದೀತೇ? ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
Kannada Bible (KNCL) BSI 2016
ಎಂತಲೇ ಆಕೆ, “ನನ್ನಂಥ ಮುದುಕಿಗೆ ಸಂಭೋಗ ಸಾಧ್ಯವೆ? ನನ್ನ ಯಜಮಾನರೂ ಮುದುಕರಲ್ಲವೆ?” ಎಂದುಕೊಂಡು ನಕ್ಕಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸಾರಳು ತನ್ನೊಳಗೆ ನಕ್ಕು, “ನಾನು ವೃದ್ಧಳಾಗಿದ್ದೇನೆ, ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರುವಲ್ಲಿ ನನ್ನಿಂದ ಮಗುವನ್ನು ಹೆರುವದಾದೀತೇ?” ಎಂದುಕೊಂಡಳು.