Genesis 18:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.
Kannada BSI Bible 2016
ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರುಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು ಎಂದು ಹೇಳಿದನು.
Kannada Bible (KNCL) BSI 2016
ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.