Genesis 18:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಆ ಪುರುಷರು ಹೋಗಲು ಎದ್ದುನಿಂತರು. ಅವರು ಸೊದೋಮಿನ ಕಡೆಗೆ ಕಣ್ಣೆತ್ತಿ ನೋಡಿ ಆ ಕಡೆಗೆ ನಡೆಯಲಾರಂಭಿಸಿದರು. ಅವರನ್ನು ಕಳುಹಿಸಿಕೊಡಲು ಅಬ್ರಹಾಮನು ಅವರ ಸಂಗಡ ಸ್ವಲ್ಪದೂರ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.
Kannada BSI Bible 2016
ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನುಷ್ಯರು ಅಲ್ಲಿಂದ ಹೊರಟು ಸೊದೋವಿುನ ಕಡೆಗೆ ನೋಡಿದರು; ಅಬ್ರಹಾಮನು ಅವರನ್ನು ಸಾಗಕಳುಹಿಸುತ್ತಾ ಅವರ ಜೊತೆಯಲ್ಲೇ ಬಂದಿದ್ದನು.
Kannada Bible (KNCL) BSI 2016
ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮ್ ಕಾಣಿಸುತ್ತಿದ್ದ ಒಂದು ಸ್ಥಳಕ್ಕೆ ಬಂದರು. ಅವರನ್ನು ಸಾಗಕಳುಹಿಸುತ್ತಾ ಅಬ್ರಹಾಮನೂ ಅವರ ಜೊತೆಯಲ್ಲೇ ಅಲ್ಲಿಗೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡುವುದಕ್ಕೆ ಅವರ ಸಂಗಡ ಹೋದನು.