Genesis 18:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
Kannada BSI Bible 2016
ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.
Kannada Bible (KNCL) BSI 2016
ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.