Genesis 18:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.
Kannada BSI Bible 2016
ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನ ಎದುರಿನಲ್ಲಿ ಯಾರೋ ಮೂರು ಮಂದಿ ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವದಕ್ಕೆ ಅವನು ಗುಡಾರದ ಬಾಗಲಿನಿಂದ ಓಡಿ ಹೋಗಿ
Kannada Bible (KNCL) BSI 2016
ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು, ಮೂವರು ಪುರುಷರು ಹತ್ತಿರದಲ್ಲಿ ನಿಂತಿದ್ದರು. ಅವನು ಅವರನ್ನು ಕಂಡು ಅವರಿಗೆ ಎದುರಾಗಿ ಡೇರೆಯ ಬಾಗಿಲಿನಿಂದ ಓಡಿಬಂದು ನೆಲದವರೆಗೂ ಬಗ್ಗಿ ನಮಸ್ಕರಿಸಿದನು.