Genesis 18:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದುವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ? ನೀನು ಆ ಪಟ್ಟಣವನ್ನು ನಾಶಮಾಡುವಿಯೋ? ಖಂಡಿತವಾಗಿಯೂ ಇಲ್ಲ! ಅಲ್ಲಿ ಜೀವಿಸುತ್ತಿರುವ ಐವತ್ತು ಮಂದಿ ನೀತಿವಂತರಿಗಾಗಿ ನೀನು ಆ ಪಟ್ಟಣವನ್ನು ಉಳಿಸಿ ಕಾಪಾಡುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?
Kannada BSI Bible 2016
ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?
Kannada Bible (KNCL) BSI 2016
ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ಸಜ್ಜನರಿದ್ದಾರು. ಅದರಲ್ಲಿ ಐವತ್ತು ಮಂದಿ ಸಜ್ಜನರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ, ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?