Genesis 18:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
Kannada BSI Bible 2016
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -
Kannada Bible (KNCL) BSI 2016
ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?\ ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.