Genesis 18:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದುವೇಳೆ ಐದು ಮಂದಿ ಕಡಿಮೆಯಾಗಿದ್ದು ನಲವತ್ತೈದು ಮಂದಿ ಮಾತ್ರ ನೀತಿವಂತರಿದ್ದರೆ ಆ ಪಟ್ಟಣವನ್ನು ನಾಶಮಾಡುವಿಯಾ?” ಎಂದು ಕೇಳಿದನು. ಅದಕ್ಕೆ ಯೆಹೋವನು ಅವನಿಗೆ, “ನಾನು ನಲವತ್ತೈದು ಮಂದಿ ನೀತಿವಂತರನ್ನು ಕಂಡರೂ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
Kannada BSI Bible 2016
ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ವೇಳೆ ಐವತ್ತು ಮಂದಿ ನೀತಿವಂತರಿಗೆ ಐದು ಮಂದಿ ಕಡಿಮೆಯಾಗಿದ್ದಾರು; ಐದು ಮಂದಿ ಕಡಿಮೆಯಾದದ್ದಕ್ಕೆ ಪಟ್ಟಣವನ್ನೆಲ್ಲಾ ನಾಶಮಾಡುವಿಯಾ ಎಂದು ಹೇಳಲು ಯೆಹೋವನು - ಅಲ್ಲಿ ನಾಲ್ವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವದಿಲ್ಲ ಅಂದನು.
Kannada Bible (KNCL) BSI 2016
ಒಂದು ವೇಳೆ ಐವತ್ತು ಮಂದಿ ಸಜ್ಜನರಿಗೆ ಐದು ಮಂದಿ ಕಡಿಮೆಯಾಗಿದ್ದಾರು. ಐದು ಮಂದಿ ಕಡಿಮೆಯಾದುದಕ್ಕೆ ಪಟ್ಟಣವನ್ನೆಲ್ಲ ನಾಶಮಾಡುವಿರೋ?” ಎಂದು ಕೇಳಲು ಸರ್ವೇಶ್ವರ, “ಅಲ್ಲಿ ನಲವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವುದಿಲ್ಲ” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ, ಆ ಐದು ಮಂದಿ ಇಲ್ಲದ್ದರಿಂದ ಪಟ್ಟಣವನ್ನು ನಾಶಮಾಡುವಿರೋ?” ಎಂದು ಕೇಳಿದನು. ಅದಕ್ಕೆ ದೇವರು, “ನಲವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವುದಿಲ್ಲ,” ಎಂದರು.