Genesis 18:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮತ್ತೆ ಅಬ್ರಹಾಮನು ದೇವರಿಗೆ, “ಕೇವಲ ನಲವತ್ತು ಮಂದಿ ನೀತಿವಂತರನ್ನು ಕಂಡರೆ, ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಲವತ್ತು ಮಂದಿ ನೀತಿವಂತರನ್ನು ಕಂಡರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು.
Kannada BSI Bible 2016
ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು ಆತನ ಸಂಗಡ ಇನ್ನೂ ಮಾತಾಡಿ - ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಎನ್ನಲು ಆತನು - ನಾಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶಮಾಡುವದಿಲ್ಲ ಅಂದನು.
Kannada Bible (KNCL) BSI 2016
ಅಬ್ರಹಾಮನು ಇನ್ನೂ ಮುಂದುವರೆದು, “ಒಂದು ವೇಳೆ ಅಲ್ಲಿ ನಲವತ್ತು ಮಂದಿ ಸಿಕ್ಕಾರು\ಎನ್ನಲು \ನಲವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು ದೇವರ ಸಂಗಡ ಇನ್ನೂ ಮಾತನಾಡಿ, “ಅಲ್ಲಿ ನಲವತ್ತು ಮಂದಿ ದೊರೆತರೆ, ಏನು ಮಾಡುವಿರಿ?” ಎನ್ನಲು, ಅದಕ್ಕೆ ದೇವರು, “ನಲವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವುದಿಲ್ಲ,” ಎಂದರು.
Recommended Reading