Genesis 18:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
Kannada BSI Bible 2016
ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು - ಸ್ವಾಮೀ, ಕೋಪಮಾಡಬಾರದು; ಇನ್ನೂ ಮಾತಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು ಎನ್ನಲು ಆತನು - ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವದಿಲ್ಲ ಅಂದನು.
Kannada Bible (KNCL) BSI 2016
ಅಬ್ರಹಾಮನು, “ಸ್ವಾಮೀ, ಕೋಪಮಾಡಬೇಡಿ; ಇನ್ನೂ ಮಾತಾಡುತ್ತೇನೆ. ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಸರ್ವೇಶ್ವರ, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೂ ಅದನ್ನು ನಾಶಮಾಡುವುದಿಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ಯೆಹೋವ ದೇವರಿಗೆ ಕೋಪಬಾರದೆ ಇರಲಿ, ನಾನು ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಇದ್ದರೆ,” ಎಂದಾಗ, ದೇವರು, “ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ, ನಾಶಮಾಡುವುದಿಲ್ಲ,” ಎಂದರು.