Genesis 18:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಅಬ್ರಹಾಮನು, “ನನ್ನ ಯೆಹೋವನು ಏನೂ ತಿಳಿದುಕೊಳ್ಳದಿರಲಿ. ನಾನು ಮತ್ತೊಂದು ಪ್ರಶ್ನೆ ಕೇಳುವೆ. ಅಲ್ಲಿ ಇಪ್ಪತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಇಪ್ಪತ್ತು ಮಂದಿ ನೀತಿವಂತರನ್ನು ಕಂಡರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.
Kannada BSI Bible 2016
ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ಇಗೋ, ಸ್ವಾವಿುಯ ಸಂಗಡ ಮಾತಾಡುವದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಎನ್ನಲು ಆತನು - ಇಪ್ಪತ್ತು ಮಂದಿಯಿದ್ದರೆ ಅವರ ನಿವಿುತ್ತ ಅದನ್ನು ಉಳಿಸುವೆನು, ನಾಶಮಾಡುವದಿಲ್ಲ ಅಂದನು.
Kannada Bible (KNCL) BSI 2016
ಅವನು, “ಸ್ವಾಮಿಯ ಸಂಗಡ ಮಾತನಾಡಲು ನಾನು ಇನ್ನೂ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತೇ ಮಂದಿ ಅಲ್ಲಿ ಸಿಕ್ಕಾರು,” ಎನ್ನಲು, ಸರ್ವೇಶ್ವರ, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಬಂದಿದ್ದೇನೆ. ಒಂದು ವೇಳೆ ಇಪ್ಪತ್ತು ಮಂದಿ ಸಿಕ್ಕಿದರೆ ಏನು ಮಾಡುವಿರಿ?” ಎಂದನು. ಅದಕ್ಕೆ ದೇವರು, “ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.