Genesis 18:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಅಬ್ರಹಾಮನು, “ಯೆಹೋವನೇ, ದಯಮಾಡಿ ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಇದೊಂದು ಸಲ ಮಾತ್ರ ಪ್ರಶ್ನೆ ಕೇಳುವೆ. ಹತ್ತು ಮಂದಿ ನೀತಿವಂತರನ್ನು ಕಂಡರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಾನು ಆ ಪಟ್ಟಣದಲ್ಲಿ ಹತ್ತು ಮಂದಿ ನೀತಿವಂತರನ್ನು ಕಂಡರೂ, ಅದನ್ನು ನಾಶಮಾಡುವುದಿಲ್ಲ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.
Kannada BSI Bible 2016
ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು - ಸ್ವಾಮೀ, ನಿನಗೆ ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು ಎನ್ನಲು ಆತನು - ಹತ್ತು ಮಂದಿಯ ನಿವಿುತ್ತವೂ ಅದನ್ನು ಉಳಿಸುವೆನು, ನಾಶಮಾಡುವದಿಲ್ಲ ಅಂದನು.
Kannada Bible (KNCL) BSI 2016
ಅಬ್ರಹಾಮನು, “ಸ್ವಾಮೀ, ಸಿಟ್ಟುಗೊಳ್ಳಬೇಡಿ; ಇನ್ನು ಒಂದೇ ಒಂದು ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತೇ ಮಂದಿ ಸಿಕ್ಕಾರು” ಎನ್ನಲು, ಸರ್ವೇಶ್ವರ, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು, “ಯೆಹೋವ ದೇವರೇ, ನಿಮಗೆ ಕೋಪಬಾರದೆ ಇರಲಿ. ಇನ್ನು ಒಂದೇ ಸಾರಿ ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಿದರೆ,” ಎಂದಾಗ, ದೇವರು, “ಹತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.