Genesis 18:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಅಬ್ರಹಾಮನೊಂದಿಗೆ ಮಾತಾಡುವುದನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು. ಅಬ್ರಹಾಮನು ಸಹ ತನ್ನ ಮನೆಗೆ ಹಿಂತಿರುಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.
Kannada BSI Bible 2016
ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅಬ್ರಹಾಮನ ಸಂಗಡ ಮಾತಾಡುವದನ್ನು ಮುಗಿಸಿ ಹೊರಟುಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.
Kannada Bible (KNCL) BSI 2016
ಅನಂತರ ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿ ಸರ್ವೇಶ್ವರ ಸ್ವಾಮಿ ಹೊರಟುಹೋದರು. ಅಬ್ರಹಾಮನು ತನ್ನ ಮನೆಗೆ ಹಿಂತಿರುಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿದ ಕೂಡಲೆ ಹೊರಟು ಹೋದರು. ಅಬ್ರಹಾಮನು ತನ್ನ ಮನೆಗೆ ಹಿಂದಿರುಗಿದನು.