Genesis 18:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ಆ ಮೂವರು ಪುರಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.
Kannada BSI Bible 2016
ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಬೆಳಿಸಬಹುದು ಎನ್ನಲು ಅವರು - ನೀನು ಹೇಳಿದಂತೆ ಮಾಡಬಹುದು ಅಂದರು.
Kannada Bible (KNCL) BSI 2016
ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು. ದಾಸನಿರುವ ಸ್ಥಳದ ಹತ್ತಿರ ಹಾದುಹೋಗುತ್ತಿದ್ದೀರಲ್ಲವೇ?” ಎನ್ನಲು ಅವರು “ನೀನು ಹೇಳಿದಂತೆಯೇ ಆಗಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸ್ವಲ್ಪ ಆಹಾರವನ್ನು ತರುತ್ತೇನೆ. ತರುವಾಯ ನೀವು ಮುಂದೆ ಹೊರಟು ಹೋಗಬಹುದು. ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ನೀನು ಹೇಳಿದಂತೆಯೇ ಮಾಡು,” ಎಂದರು.