Genesis 18:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವನು ತನ್ನ ಪಶುಗಳಿದ್ದಲ್ಲಿಗೆ ಓಡಿಹೋಗಿ ಉತ್ತಮವಾದ ಎಳೆಕರುವನ್ನು ತೆಗೆದು ಸೇವಕನಿಗೆ ಕೊಟ್ಟು, “ಬೇಗನೇ ಕರುವನ್ನು ಕೊಯ್ದು, ಊಟಕ್ಕೆ ಸಿದ್ಧಮಾಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು.
Kannada BSI Bible 2016
ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಅಡಿಗೆ ಮಾಡಿದನು.
Kannada Bible (KNCL) BSI 2016
ಅನಂತರ ದನಗಳ ಹಟ್ಟಿಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಅಡಿಗೆ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು ದನದ ಮಂದೆಯ ಬಳಿಗೆ ಓಡಿಹೋಗಿ, ಒಳ್ಳೆಯ ಕರುವನ್ನು ತೆಗೆದುಕೊಂಡು ಒಬ್ಬ ಸೇವಕನಿಗೆ ಕೊಟ್ಟನು. ಆ ಸೇವಕನು ಬೇಗನೆ ಅಡಿಗೆಯನ್ನು ಸಿದ್ಧಪಡಿಸಿದನು.