Genesis 18:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಪುರುಷರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ ಸಾರಳು ಎಲ್ಲಿ?” ಎಂದು ಕೇಳಿದರು. ಅಬ್ರಹಾಮನು ಅವರಿಗೆ, “ಆಕೆ ಗುಡಾರದಲ್ಲಿ ಇದ್ದಾಳೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.
Kannada BSI Bible 2016
ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಅವರು ಅವನನ್ನು - ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ ಎಂದು ಕೇಳಲು ಅವನು - ಅಗೋ, ಗುಡಾರದಲ್ಲಿದ್ದಾಳೆ ಅಂದನು.
Kannada Bible (KNCL) BSI 2016
ಬಳಿಕ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಆ ಅತಿಥಿಗಳು ವಿಚಾರಿಸಿದಾಗ, “ಅಲ್ಲಿ ಗುಡಾರದಲ್ಲಿದ್ದಾಳೆ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಕೇಳಲು, ಅವನು, “ಇಗೋ, ಡೇರೆಯಲ್ಲಿದ್ದಾಳೆ,” ಎಂದನು.