Genesis 19:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಾಯಂಕಾಲ, ದೇವದೂತರಿಬ್ಬರು ಸೊದೋಮ್ ನಗರಕ್ಕೆ ಬಂದರು. ನಗರದ ಬಾಗಿಲುಗಳ ಬಳಿ ಕುಳಿತುಕೊಂಡಿದ್ದ ಲೋಟನು ದೇವದೂತರನ್ನು ಕಂಡು, ಅವರ ಬಳಿಗೆ ಹೋಗಿ ನಮಸ್ಕರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,
Kannada BSI Bible 2016
ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್‌ಗೆ ಬಂದಾಗ ಲೋಟನು ಸೊದೋ ಮ್‌ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋವಿುಗೆ ಬಂದಾಗ ಲೋಟನು ಸೊದೋವಿುನ ಊರುಬಾಗಲಲ್ಲಿ ಕೂತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು ಎದುರುಗೊಂಡು ಬೊಗ್ಗಿ ನಮಸ್ಕರಿಸಿ -
Kannada Bible (KNCL) BSI 2016
ಆ ದೂತರಿಬ್ಬರು ಸೊದೋಮಿಗೆ ಬಂದಾಗ ಸಾಯಂಕಾಲವಾಗಿತ್ತು. ಲೋಟನು ಆ ಊರಬಾಗಿಲಲ್ಲೇ ಕುಳಿತುಕೊಂಡಿದ್ದನು. ದೂತರನ್ನು ಕಂಡದ್ದೇ ಅವನು ಎದ್ದುಬಂದು, ಬಾಗಿ ನಮಸ್ಕರಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ, ಲೋಟನು ಸೊದೋಮಿನ ಬಾಗಿಲಲ್ಲಿ ಕುಳಿತಿದ್ದನು. ಲೋಟನು ಅವರನ್ನು ಎದುರುಗೊಳ್ಳುವುದಕ್ಕೆ ಎದ್ದು ನೆಲದವರೆಗೆ ಬಾಗಿ,