Genesis 19:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಮನೆಯೊಳಗಿದ್ದ ಇಬ್ಬರು ಪುರುಷರು ಬಾಗಿಲನ್ನು ತೆರೆದು ಲೋಟನನ್ನು ಮನೆಯೊಳಗೆ ಎಳೆದುಕೊಂಡು ಬಾಗಿಲನ್ನು ಮುಚ್ಚಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಎಳೆದುಕೊಂಡು ಮನೆಯೊಳಗೆ ಸೇರಿಸಿ ಕದ ಮುಚ್ಚಿದರು.
Kannada BSI Bible 2016
ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಸೇರಿಸಿ ಕದಮುಚ್ಚಿದರು.
Kannada Bible (KNCL) BSI 2016
ಅಷ್ಟರಲ್ಲಿ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮತ್ತ ಎಳೆದು ಮನೆಯೊಳಗೆ ಹಾಕಿಕೊಂಡು, ಬಾಗಿಲನ್ನು ಮುಚ್ಚಿದರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಲೋಟನ ಮನೆಗೆ ಬಂದಿದ್ದ ಆ ದೂತರಿಬ್ಬರು ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಒಳಕ್ಕೆ ಎಳೆದುಕೊಂಡು ಬಾಗಿಲನ್ನು ಮುಚ್ಚಿದರು.