Genesis 19:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಇಬ್ಬರು ಪುರುಷರು ಲೋಟನಿಗೆ, “ನಿನ್ನ ಕುಟುಂಬದ ಬೇರೆ ಯಾರಾದರೂ ಈ ನಗರದಲ್ಲಿ ಇದ್ದಾರೆಯೇ? ನಿನಗೆ ಅಳಿಯಂದಿರಾಗಲಿ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇಲ್ಲಿ ವಾಸವಾಗಿದ್ದಾರೆಯೇ? ನಿನ್ನ ಕುಟುಂಬದ ಯಾರಾದರೂ ಈ ನಗರದಲ್ಲಿದ್ದರೆ ಈಗಲೇ ಇಲ್ಲಿಂದ ಹೊರಡುವಂತೆ ಅವರಿಗೆ ತಿಳಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.
Kannada BSI Bible 2016
ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ದೂತರು ಲೋಟನಿಗೆ - ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಬೇರೆ ಎಲ್ಲರನ್ನೂ ಊರಹೊರಕ್ಕೆ ಕರೆದುಕೊಂಡು ಬಾ.
Kannada Bible (KNCL) BSI 2016
ಬಳಿಕ ಆ ಮನುಷ್ಯರಿಬ್ಬರು ಲೋಟನಿಗೆ, “ನಿನಗೆ ಇಲ್ಲಿ ಯಾರು ಯಾರು ಇದ್ದಾರೆಯೋ, ಗಂಡುಹೆಣ್ಣು ಮಕ್ಕಳು, ಅಳಿಯಂದಿರು ಹಾಗೂ ಪಟ್ಟಣದಲ್ಲಿ ನಿನಗಿರುವ ಬೇರೆ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದೂತರಿಬ್ಬರು ಲೋಟನಿಗೆ, “ಇಲ್ಲಿ ನಿನಗೆ ಇನ್ನೂ ಯಾರಾದರೂ ಇದ್ದಾರೋ? ನಿನ್ನ ಅಳಿಯಂದಿರನ್ನೂ, ನಿನ್ನ ಪುತ್ರರನ್ನೂ, ಪುತ್ರಿಯರನ್ನೂ, ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಈ ಸ್ಥಳದಿಂದ ಹೊರಗೆ ಕರೆದುಕೊಂಡು ಬಾ.