Genesis 19:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೂರ್ಯೋದಯಕ್ಕಿಂತ ಮೊದಲೇ ಹೊರಡುವಂತೆ ದೇವದೂತರು ಲೋಟನನ್ನು ಒತ್ತಾಯಿಸಿ, “ಈ ನಗರವನ್ನು ನಾಶಗೊಳಿಸಲಾಗುವುದು. ಆದ್ದರಿಂದ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಕರೆದುಕೊಂಡು ಈ ಸ್ಥಳದಿಂದ ಓಡಿಹೋಗು, ಆಗ ನೀನು ಈ ನಗರದೊಡನೆ ನಾಶವಾಗುವುದಿಲ್ಲ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.
Kannada BSI Bible 2016
ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊತ್ತು ಮೂಡುವದಕ್ಕೆ ಮುಂಚೆ ಆ ದೂತರು ಲೋಟನಿಗೆ - ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣು ಮಕ್ಕಳನ್ನೂ ಬೇಗ ಕರಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು ಎಂದು ಹೇಳಿ ತ್ವರೆಪಡಿಸಿದರು.
Kannada Bible (KNCL) BSI 2016
ಹೊತ್ತು ಮೂಡುವುದಕ್ಕೆ ಮುಂಚೆ ದೂತರು ಲೋಟನಿಗೆ, “ಏಳು, ನಿನ್ನ ಹೆಂಡತಿ ಮತ್ತು ಹೆಣ್ಣುಮಕ್ಕಳಿಬ್ಬರನ್ನು ಕರೆದುಕೊಂಡು ಬೇಗನೆ ಹೊರಡು; ಇಲ್ಲದಿದ್ದರೆ ಊರಿಗೆ ಬರಲಿರುವ ದಂಡನೆಯಲ್ಲಿ ನೀನೂ ಸಿಕ್ಕಿಕೊಂಡು ನಾಶವಾಗಬೇಕಾದೀತು,” ಎಂದು ಹೇಳಿ ತ್ವರೆಪಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೂರ್ಯೋದಯವಾಗುವ ಮೊದಲು ದೂತರು ಲೋಟನನ್ನು ತ್ವರೆಪಡಿಸಿ, “ಈ ಪಟ್ಟಣಕ್ಕೆ ಉಂಟಾಗುವ ದಂಡನೆಯಿಂದ ನೀನು ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಪುತ್ರಿಯರನ್ನೂ ಕರೆದುಕೊಂಡು ನಡೆ,” ಎಂದರು.