Genesis 19:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಲೋಟನು ಗಲಿಬಿಲಿಗೊಂಡು ತಡಮಾಡಲು ಆ ಇಬ್ಬರು ಪುರುಷರು ಲೋಟನನ್ನೂ ಅವನ ಹೆಂಡತಿಯನ್ನೂ ಅವನ ಇಬ್ಬರು ಹೆಣ್ಣುಮಕ್ಕಳನ್ನೂ ಕೈಹಿಡಿದುಕೊಂಡು ನಗರದ ಹೊರಕ್ಕೆ ಸುರಕ್ಷಿತವಾಗಿ ತಂದುಬಿಟ್ಟರು. ಹೀಗೆ ಯೆಹೋವನು ಲೋಟನಿಗೂ ಅವನ ಕುಟುಂಬದವರಿಗೂ ದಯೆತೋರಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.
Kannada BSI Bible 2016
ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಹೊರಗೆ ತಂದ ಮೇಲೆ ಆತನು -
Kannada Bible (KNCL) BSI 2016
ಅವನು ಇನ್ನೂ ತಡಮಾಡುತ್ತಿರುವುದನ್ನು ಕಂಡು, ಆ ಮನುಷ್ಯರು ಅವನನ್ನು ಹಾಗು ಅವನ ಹೆಂಡತಿ ಮಕ್ಕಳನ್ನು ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಸರ್ವೇಶ್ವರ ಸ್ವಾಮಿಗೆ ಅವನ ಮೇಲೆ ಅಷ್ಟು ಕನಿಕರವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಡಮಾಡಿದಾಗ ಯೆಹೋವ ದೇವರು ಅವನನ್ನು ಕನಿಕರಿಸಿದ್ದರಿಂದ, ಆ ದೂತರು ಅವನ ಕೈಯನ್ನೂ, ಅವನ ಹೆಂಡತಿಯ ಕೈಯನ್ನೂ, ಅವನ ಇಬ್ಬರು ಪುತ್ರಿಯರ ಕೈಗಳನ್ನೂ ಹಿಡಿದು, ಅವರನ್ನು ಪಟ್ಟಣದ ಹೊರಗೆ ತಂದುಬಿಟ್ಟರು.