Genesis 19:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೋಟನು ಅವರಿಗೆ, “ಸ್ವಾಮಿಗಳೇ, ದಯವಿಟ್ಟು ನನ್ನ ಮನೆಗೆ ಬನ್ನಿ. ನಾನು ನಿಮ್ಮನ್ನು ಉಪಚರಿಸುವೆನು. ನಿಮ್ಮ ಕೈಕಾಲುಗಳನ್ನು ತೊಳೆದುಕೊಂಡು ಈ ರಾತ್ರಿ ನಮ್ಮ ಮನೆಯಲ್ಲೇ ಇರಿ. ನಾಳೆ ಮುಂಜಾನೆ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ದೇವದೂತರು, “ಈ ಚೌಕದಲ್ಲಿ ನಾವು ಈ ರಾತ್ರಿ ಕಳೆಯುತ್ತೇವೆ” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು
Kannada BSI Bible 2016
ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಾವಿುಗಳೇ, ನಿಮ್ಮ ದಾಸನ ಮನೆಗೆ ಬಂದು ಇಳುಕೊಂಡು ಕಾಲುಗಳನ್ನು ತೊಳಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡುಕೊಂಡು ಹೋಗಬಹುದು ಅಂದನು. ಅವರು - ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ,
Kannada Bible (KNCL) BSI 2016
ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ರಾತ್ರಿ ತಂಗಿರಿ. ಕಾಲುಗಳನ್ನು ತೊಳೆದುಕೊಳ್ಳಿ. ಬೆಳಿಗ್ಗೆ ಎದ್ದು ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸ್ವಾಮಿಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ತಂಗಿ, ರಾತ್ರಿ ಕಳೆಯಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ. ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ಹಾಗಲ್ಲ, ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ,” ಎಂದರು.