Genesis 19:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಗೋ, ಅಲ್ಲಿ ಒಂದು ಚಿಕ್ಕ ಊರಿದೆ. ಆ ಊರಿಗೆ ಓಡಿಹೋಗಲು ನನಗೆ ಅಪ್ಪಣೆಕೊಡಿ. ನಾನು ಅಲ್ಲಿಗೆ ಓಡಿಹೋಗಿ ಸುರಕ್ಷಿತವಾಗಿರುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು.
Kannada BSI Bible 2016
ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಗೋ, ಅಲ್ಲಿ ಒಂದು ಊರು ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವದು; ಆ ಊರು ಸಣ್ಣದಲ್ಲವೇ ಅಂದನು.
Kannada Bible (KNCL) BSI 2016
ಆದುದರಿಂದ ಅಗೋ, ಅಲ್ಲಿ ಊರೊಂದು ಕಾಣಿಸುತ್ತಿದೆ; ಅದು ಅಷ್ಟೇನು ದೂರವಲ್ಲ, ಚಿಕ್ಕ ಊರು, ಹೌದಲ್ಲವೆ? ಅಲ್ಲಿಗಾದರೂ ಹೋಗಲು ಅಪ್ಪಣೆಯಾದರೆ ಪ್ರಾಣ ಉಳಿಯುತ್ತದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪಟ್ಟಣವನ್ನು ನೋಡಿರಿ. ನಾನು ಅಲ್ಲಿಗೆ ಓಡಿಹೋಗಲು ಸಮೀಪವಾಗಿದೆ ಮತ್ತು ಅದು ಸಣ್ಣದು. ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುತ್ತೇನೆ. ಇದರಿಂದ ನನ್ನ ಪ್ರಾಣವು ಉಳಿಯುವುದು,” ಎಂದನು.